ಸುದ್ದಿ360 ದಾವಣಗೆರೆ.ಜು.04: ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಎ.ಆರ್. ಉಜ್ಜನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಾವಣಗೆರೆ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ 13 ನಿರ್ದೇಶಕರ ಸ್ಥಾನಗಳಿಗೆ ಜೂ.25ರಂದು ಚುನಾವಣೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎ.ಆರ್. ಉಜ್ಜನಪ್ಪರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಗಿದೆ.
ಎ.ಆರ್. ಉಜ್ಜನಪ್ಪ, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದು, ದಾವಣಗೆರೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಲಯನ್ಸ್ ಜಿಲ್ಲಾ ಗವರ್ನರ್ ಆಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಅವರನ್ನು ದಾವಣಗೆರೆ ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ, ಗೌರವ ಕಾರ್ಯದರ್ಶಿ ಬಿ. ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ ಮತ್ತು ಗೌರವ ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯರಿ ಅಭಿನಂದಿಸಿದ್ದಾರೆ.