ಅಬಕಾರಿ ಟೆಂಡರ್ ಅವ್ಯವಹಾರ – ಕಾಂಗ್ರೆಸ್ ವಿವರ ನೀಡಲಿ: ಸಿಎಂ ಬೊಮ್ಮಾಯಿ

Excise Tender Absence - Let the Congress give details

ಉತ್ತರ ಕನ್ನಡ ( ಸಿದ್ಧಾಪುರ) ಫೆ. 28:  ಅಬಕಾರಿ ಟೆಂಡರ್ ನಲ್ಲಿ ಹಗರಣವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದ್ದು, ಈ ಬಗ್ಗೆ ವಿವರಗಳನ್ನು ನೀಡಲಿ. ಯಾವುದೇ ತನಿಖೆಗೆ ನಾವು ಸಿದ್ಧರಿದ್ದೇವೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು  ಇಂದು ಸಿದ್ಧಾಪುರ ವಿವಿಧ  ಯೋಜನೆಗಳ ಅಡಿಯಲ್ಲಿ ಸೌಲಭ್ಯ ವಿತರಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ  ನೀಡಿದರು.

ಅಬಕಾರಿ ಟೆಂಡರ್ ನಲ್ಲಿ ಹಗರಣವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿರುವ ಬಗ್ಗೆ  ವಿವರ ಪ್ರತಿಕ್ರಿಯೆ ನೀಡಿ ವಿವರಗಳನ್ನು ನೀಡಲಿ. ಯಾವುದೇ ವಿವರಗಳನ್ನು ನೀಡದೇ ಆರೋಪ ಮಾಡಿದರೆ ಪ್ರಯೋಜನವಿಲ್ಲ ಎಂದರು.

ಲೋಕಾಯುಕ್ತಕ್ಕೆ ದೂರು ನೀಡಲಿ

ಶಾಸಕ ಪ್ರಿಯಾಂಕ ಖರ್ಗೆ ಆಡಿಯೋ ಬಿಡುಗಡೆ ಮಾಡಿರುವ ಬಗ್ಗೆ ಉತ್ತರಿಸಿ ಅವರ ಬಗ್ಗೆಯೇ ಸಾಕಷ್ಟು ಆರೋಪಗಳಿವೆ ಪಿ.ಎಸ್.ಐ ಪ್ರಕರಣದಲ್ಲಿ ಅವರ ಮೇಲೆ ಆರೋಪವಿದೆ. ವಿವರಗಳನ್ನು ನೀಡಲಿ. ಈಗ ಲೋಕಾಯುಕ್ತವಿದ್ದು, ದೂರು ನೀಡಿದರೆ, ತನಿಖೆಯಾಗುತ್ತದೆ ಎಂದರು.

Leave a Comment

error: Content is protected !!