ಅಮರನಾಥ: ಸಹಾಯವಾಣಿಯ ವಿವರ ಇಲ್ಲಿದೆ

ಕನ್ನಡಿಗರ ರಕ್ಷಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.09: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು,  ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತರಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ ಎಂದರು.

ರಕ್ಷಣಾ ಕಾರ್ಯಕ್ಕಾಗಿ  ಸಹಾಯವಾಣಿಯನ್ನೂ ಸಹ ತೆರೆಯಲಾಗಿದೆ. ಈಗಾಗಲೇ 15-20 ಜನ ಕರೆ ಮಾಡಿ ತಾವು ಸಿಲುಕಿರುವ  ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯವನ್ನು ಕೂಡಲೇ ಕೈಗೊಳ್ಳಲಾಗುವುದು ಎಂದರು.

ಕೇಂದ್ರ ಸರ್ಕಾರ, ಗಡಿ ರಕ್ಷಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಎಲ್ಲರೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ. ಮುಖ್ಯ ಕಾರ್ಯದರ್ಶಿಗಳು ನೇರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ. ತೊಂದರೆಗೆ ಸಿಲುಕಿರುವವರು ಸಹಾಯವಾಣಿಗೆ ಕರೆ ಮಾಡಿದರೆ. ಕೂಡಲೇ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದರು.

ಸಹಾಯವಾಣಿಯ ವಿವರ:

ಎನ್.ಡಿ.ಆರ್.ಎಫ್: 011-23438252, 011-23438253

ಕಶ್ಮೀರ್ ಡಿವಿಷನಲ್ ಹೆಲ್ಪ್ ಲ್ಲೈನ್: 0914- 2496240

ದೇವಸ್ಥಾನ ಮಂಡಳಿಯ ಸಹಯಾವಾಣಿ: 0194-2313149

ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-1070, 22340676

ಸಹಾಯವಾಣಿ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿದೆ.

admin

admin

Leave a Reply

Your email address will not be published. Required fields are marked *

error: Content is protected !!