ಸುದ್ದಿ360 ಬೆಂಗಳೂರು.ಜು.05: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ ಸೇರಿದಂತೆ ಐದು ಕಡೆ ಮಂಗಳವಾರ ನಸುಕಿನಿಂದಲೇ ಎಸಿಬಿ ಶೋಧ ಕಾರ್ಯ ನಡೆಸಿದೆ.
ಆದಾಯ ಮೀರಿದ ಆಸ್ತಿ ಹೊಂದಿರುವುದಾಗಿ ಎಫ್ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಜಾರಿ ನಿರ್ದೇಶನಾಲಯ ನೀಡಿರುವ ವರದಿ ಆಧರಿಸಿ ತಿನಿಖೆ ಕೈಗೊಂಡಿದೆ.
ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಸಮೀಪದ ಜಮೀರ್ ಅಹಮ್ಮದ್ ಅವರ ಮನೆ, ಸಿಲ್ವರ್ ಓಕ್ ಅಪಾರ್ಟ್ ಮೆಂಟ್ ಫ್ಲ್ಯಾಟ್, ಸದಾಶಿವನಗರದಲ್ಲಿರುವ ಅತಿಥಿಗೃಹ, ಕಲಾಸಿಪಾಳ್ಯದಲ್ಲಿನ ನ್ಯಾಷನಲ್ ಟ್ರಾವೆಲ್ಸ್ ಕಚೇರಿಯಲ್ಲಿ ಶೋಧ ಕಾರ್ಯ ಕೈಗೊಂಡು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.
ಈ ಹಿಂದೆ 2021ರ ಆಗಸ್ಟ್ 5 ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಮೀರ್ ಅಹಮ್ಮದ್ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧಿಸಿದ್ದರು. ಅಕ್ಟೋಬರ್ ನಲ್ಲಿ ನೋಟಿಸ್ ಜಾರಿ ಮಾಡಿ ದೆಹಲಿಗೆ ಕರೆಸಿಕೊಂಡು ವಿಚಾರಣೆ ನಡೆಸಿತ್ತು. ಇದೀಗ ಜಾರಿ ನಿರ್ದೇಶನಾಲಯದ ವರದಿಯ ಆಧಾರದಲ್ಲಿ ಎಸಿಬಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದೆ.