ಸುದ್ದಿ360 ಬೆಂಗಳೂರು, ಜೂನ್ 30: ಉದಯಪುರದಲ್ಲಿ ಆಗಿರುವುದು ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇದು ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ ದೊಡ್ಡ ಅಂತರರಾಷ್ಟ್ರೀಯ ಷಡ್ಯಂತ್ರವಿದೆ. ಅದರ ಸಂಪೂರ್ಣ ತನಿಖೆಯಾಗಬೇಕು. ಅಪರಾಧಿಗಳನ್ನು ಪತ್ತೆ ಹಚ್ಚಿ ಗಲ್ಲಿಗೇರಿಸಬೇಕು. ರಾಜಸ್ತಾನ ಸರ್ಕಾರ ಸಂಪೂರ್ಣ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದರು.
ಪ್ರಧಾನ ಮಂತ್ರಿಗಳ ನಿರ್ದೇಶನದ ಮೇರೆಗೆ ತನಿಖೆ
ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ದಾಖಲೆಗಳನ್ನು ಒದಗಿಸಲು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸಂಘದಲ್ಲಿ ಇರುವ ಮಾಹಿತಿ ಏನಿದೆ ಅದನ್ನು ಕೊಡಲಿ ತೊಂದರೆ ಇಲ್ಲ. ಪ್ರಧಾನ ಮಂತ್ರಿಗಳ ನಿರ್ದೇಶನದ ಮೇರೆಗೆ ತನಿಖೆ ಮಾಡಲಾಗುವುದು ಎಂದರು.
ಬಿ.ಟಿ.ಲಲಿತಾ ನಾಯಕ್ ಅವರು ಪಿ ಎಸ್ ಐ ನೇಮಕಾತಿಗೆ ಪರೀಕ್ಷೆ ನಡೆಸಬಾರದು ಎಂದು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೊದಲು ತನಿಖೆಯಾಗಲಿ ಎಂದು ಸ್ಪಷ್ಟವಾಗಿ ಹೇಳಿರುವುದಾಗಿ ತಿಳಿಸಿದರು.