ಸುದ್ದಿ360 ದಾವಣಗೆರೆ.ಜು.01: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿಗೆ ಈ ಕೆಳಕಂಡ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 53(ಎ) ರಿಂದ 5(ವಿ) ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ದಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗಕ್ಕಾಗಿ ನೇರಸಾಲ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ(ನವೀಕರಣ)(2019-20ನೇ ಸಾಲಿನ 4ನೇ ಕಂತು ಹಾಗೂ 2020-21ನೇ ಸಾಲಿನ 3 ಕಂತು) ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಜಿಯನ್ನು suvidha.karnataka.gov.in ತಂತ್ರಾಂಶದ ಮೂಲಕ ಮಾತ್ರವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆ.12 ಕೊನೆಯದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ವೆಬ್‍ಸೈಟ್ https://upparadevelopment.karnataka.gov.in ನ್ನು ಅಂಪರ್ಕಿಸಬೇಕೆಂದು ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎನ್.ಆರ್.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.