ಕರ್ನಾಟಕಕ್ಕೆ ಎನ್ ಐ ಎ ಅಗತ್ಯತೆ ಕುರಿತು ಕೇಂದ್ರಕ್ಕೆ ಮನವರಿಕೆ

ಪಿಎಫ್ಐ ಬ್ಯಾನ್ ಕೇಂದ್ರದಿಂದ ಶೀಘ್ರ ಕ್ರಮ: ಮುಖ್ಯಮಂತ್ರಿ ವಿಶ್ವಾಸ

ಸುದ್ದಿ360 ಮಂಗಳೂರು, ಜುಲೈ 28 : ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ , ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇಧಿಸಲಾಗುವುದು ಎಂದು ಹೇಳಿದರು.

ಪಿಎಫ್ಐ ಬ್ಯಾನ್ ಕೇಂದ್ರದಿಂದ ಶೀಘ್ರ ಕ್ರಮ

ಪಿಎಫ್‍ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕೃತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Leave a Comment

error: Content is protected !!