ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ ಅವಕಾಶ ಸಿಗಲಿದೆ. ಸಶಕ್ತ ಯುವಕರ ಜನಸಂಖ್ಯೆ ಯನ್ನು ಸಿದ್ದ ಮಾಡುವ ದೃಷ್ಟಿಯಿಂದ ಹಾಗೂ ಸಶಸ್ತ್ರ ಪಡೆಗಳಲ್ಲಿ ಯುವಶಕ್ತಿ ಯನ್ನು ತುಂಬುವ ಮಹತ್ವಾಕಾಂಕ್ಷೆ ಇದೆ.  ಪರೀಕ್ಷೆ ಬರೆದವರಿಗೆ ಆತಂಕ ಇದೆ. ಅದನ್ನು ಕೇಂದ್ರ ಸರ್ಕಾರ ಗಮನಿಸಿ ಪರಿಹಾರ ನೀಡುವ ವಿಶ್ವಾಸವಿದೆ. ಆದರೆ ಈ ನೆಪದಲ್ಲಿ ರೈಲುಗಳಿಗೆ ಬೆಂಕಿ ಹಚ್ಚುವುದು, ಖಂಡಿತವಾಗಿಯೂ ಕ್ಷಮಿಸಲಾಗದ ಅಪರಾಧ. ಪ್ರಯಾಣಿಕರಿಗೆ ತೊಂದರೆ, ಆಸ್ತಿಪಾಸ್ತಿ ನಷ್ಟವಾಗಿದೆ. ಜವಾಬ್ದಾರಿ ಇರುವವರು ಯಾರೂ ಈ ರೀತಿ ಮಾಡುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೃತ್ಯ. ಜನ ಸ್ವಲ್ಪ ದಿನಗಳಲ್ಲಿಯೇ ಅರ್ಥ ಮಾಡಿಕೊಳ್ಳುತ್ತಾರೆ ಎಂದರು.

admin

admin

Leave a Reply

Your email address will not be published. Required fields are marked *

error: Content is protected !!