ಚುನಾವಣಾ ಪ್ರೇರಿತ ಹೇಳಿಕೆಗಳಿಂದ ಕಾಂಗ್ರೆಸ್ ಜನರನ್ನು ಮರಳು ಮಾಡಲು ಹೊರಟಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜ.14: ಚುನಾವಣೆ ಸಮೀಪಿಸುತ್ತಿದ್ದಂತೆ ಹತ್ತಾರು ಚುನಾವಣಾ ಪ್ರೇರಿತ ಹೇಳಿಕೆಗಳು ಕಾಂಗ್ರೆಸ್ಸಿಗರಿಂದ ಬರುತ್ತಲೇ ಇರುತ್ತವೆ. ಇದು ಜನರಿಗೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹರಿಹರದ ಹರ ಜಾತ್ರೆ ಸಮಾರಂಭಕ್ಕೆ ತೆರಳುವ ಮುನ್ನ ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹತಾಶ ಮನಸ್ಥಿತಿಯಲ್ಲಿರುವ ಕಾಂಗ್ರೆಸಿಗರು, ಜನರನ್ನು ಮರುಳು ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ನವರು ಕೇವಲ ಮಾತನಾಡುತ್ತಾರೆ. ಆದರೆ ನಮ್ಮ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನು ಮಾಡಿ ತೋರಿಸುತ್ತಿದೆ ಎಂದರು.

200 ಯುನಿಟ್ ಉಚಿತ ವಿದ್ಯುತ್ ಅಸಾಧ್ಯ!

ಕಾಂಗ್ರೆಸ್ಸಿಗರು ತಾವು ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಹೇಳಿಕೆ ನೀಡಿದ್ದಾರೆ. ಇದು ವಾಸ್ತವದಲ್ಲಿ ಅಸಾಧ್ಯ ಎಂದು ಅವರಿಗೂ ತಿಳಿದಿದೆ. ನಾವು ಈಗಾಗಲೆ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದ್ದೇವೆ. ರಾಜ್ಯದ ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ 75 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದ್ದೇವೆ. ಇದು ಬಿಜೆಪಿಗೂ ಕಾಂಗ್ರೆಸ್‌ಗೂ ಇರುವ ವ್ಯತ್ಯಾಸ ಎಂದು ಹೇಳಿದರು.

Leave a Comment

error: Content is protected !!