ಸುದ್ದಿ360 ದಾವಣಗೆರೆ, ಆ.07: ಜಿಎಂಐಟಿ ಎಂಬಿಎ ವಿಭಾಗದ ಫೋರಮ್ ದಿಶಾ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶನಿವಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಉಡುಗೆ-ತೊಡುಗೆಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದರು. ಸಮಾರಂಭದಲ್ಲಿ ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ ಮಾತನಾಡಿ, ನಿರ್ವಹಣಾ ಕೌಶಲ್ಯ ಜೀವನದಲ್ಲಿ ಅತಿ ಮುಖ್ಯ ಹಾಗೂ ಅದನ್ನು ಅಳವಡಿಸಿಕೊಂಡು ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಬೇಕೆಂದು ಕರೆಕೊಟ್ಟರು.
ವಿಭಾಗದ ಮುಖ್ಯಸ್ಥರಾದ ಡಾ ಮಂಜುನಾಥ್ ಬಿ ಆರ್ ಮಾತನಾಡಿ, ಕಲ್ಲು ಶಿಲೆಯಾಗಲು ಶಿಲ್ಪಿ ಹೇಗೆ ಮುಖ್ಯವಾಗುತ್ತಾನೋ ಹಾಗೆ ವಿದ್ಯಾರ್ಥಿಗಳನ್ನು ಸರಿದಾರಿಗೆ ತರುವಲ್ಲಿ ಅಧ್ಯಾಪಕ ವರ್ಗದವರು ಮುಖ್ಯವಾಗುತ್ತಾರೆ ಅದನ್ನು ಅರಿತು ಸರಿ ಮಾರ್ಗದಲ್ಲಿ ನಡೆದರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂದು ತಿಳಿಹೇಳಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಎರಡು ವರ್ಷದ ಅನುಭವದ ಮಾತುಗಳನ್ನು ಇತರ ವಿದ್ಯಾರ್ಥಿಗಳೊಡನೆ ಹಂಚಿಕೊಂಡರು.
ಸಮಿಸ್ಟರ್ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು ಹಾಗೆಯೇ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ, ವಿಭಾಗದ ಮುಖ್ಯಸ್ಥರಾದ ಡಾ ಮಂಜುನಾಥ್ ಬಿ ಆರ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್, ಡಾ. ರವಿ ಕುಮಾರ್, ವಿಭಾಗದ ಅಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.