ಜೂ.23 ದಾವಣಗೆರೆಯಲ್ಲಿ ಉದ್ಯೋಗ ಮೇಳ

ಸುದ್ದಿ360 ದಾವಣಗೆರೆ, ಜೂ.20: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 ಗಂಟೆಗೆ, ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ.ಕೆ. ಕಾಲೇಜು ರಸ್ತೆ, ದಾವಣಗೆರೆ ಇಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ/ಬಿ.ಬಿ.ಎಂ, ಬಿ.ಸಿ.ಎ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಜೂ.23ರ ಗುರುವಾರ ಬೆಳಗ್ಗೆ 10-00 ಗಂಟೆಗೆ ಕನಿಷ್ಠ 5 ಸೆಟ್ ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ.ಕೆ. ಕಾಲೇಜು ರಸ್ತೆ ದಾವಣಗೆರೆ ಇಲ್ಲ್ಲಿ ಭಾಗವಹಿಸಿ ಸದರಿ “ಉದ್ಯೋಗ ಮೇಳ” ದÀ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ 08192-259446, 6361550016, 7406323294 ಸಂಪರ್ಕಿಸಬಹುದೆಂದು ಉದ್ಯೋಗ ವಿನಿಮಯ ಅಧಿಕಾರಿ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!