ಸುದ್ದಿ360 ಬೆಂಗಳೂರು, ಜ.3: ಪ್ರಧಾನಿ ನರೇಂದ್ರ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ತಿಳಿಸಿದರು. ಜ.19 ರಂದು ಪ್ರಧಾನಿ ಮೋದಿಯವರು ನಾರಾಯಣಪುರ ಆಗಮಿಸಲಿದ್ದು,ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.