ದಾವಣಗೆರೆಯಲ್ಲಿ ಜು.11ರಂದು ವಿಶ್ವಕರ್ಮ ಜನಜಾಗೃತಿ ಸಮಾವೇಶ

ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ, ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ

ಸುದ್ದಿ360, ದಾವಣಗೆರೆ, ಜು.10: ಅಖಿಲ ಕರ್ನಾಟಕ ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭವು ಅಖಿಲ ಭಾರತ ವಿಶ್ವಕರ್ಮ ಪರಿಷತ್, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಜುಲೈ 11ರಂದು ನಗರದ ಶಾಬನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ರಾಷ್ಟ್ರೀಯ ಅಧ್ಯಕ್ಷ ಎಚ್.ವಿ.ಸತೀಶಕುಮಾರ್, ಹಾಸನ ಜಿಲ್ಲೆ ಅರೆಮಾದನಹಳ್ಳಿ ಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಸ್ವಾಮೀಜಿ, ಚನ್ನಗಿರಿ ತಾಲೂಕಿನ ವಡ್ನಾಳಿನ ಶ್ರೀಅಷ್ಟೋತ್ತರ ಶತಶ್ರೀ ಶಂಕರಾತ್ಮನಂದ ಸರಸ್ವತಿ ಮಹಾಸ್ವಾಮೀಜಿ, ಸಿಂಧಗಿ ಶ್ರೀರಾಮಚಂದ್ರ ಸ್ವಾಮೀಜಿ, ಮರವಾಳಮಠದ ಶ್ರೀ ಮಹೇಂದ್ರ ಸ್ವಾಮೀಜಿ ಸೇರಿದಂತೆ ಸಮಾಜದ ವಿವಿಧ ಗುರುಗಳ ಸಾನಿಧ್ಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧ್ಯಕ್ಷ ಎಂ.ಇ.ಮೌನೇಶ್ವರಾಚಾರ್,  ಆರ್. ಪ್ರಸನ್ನಕುಮಾರ್, ಶ್ರೀಮತಿ ಪ್ರಕೃತಿ ಸುರೇಶ್ ಇವರ  ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಭೈರತಿ ಬಸವರಾಜ್, ಕೋಟಾ ಶ್ರೀನಿವಾಸ ಪೂಜಾರಿ, ಮುರುಗೇಶ ನಿರಾಣಿ, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಈಶ್ವರ ಖಂಡ್ರೆ, ಬಿ.ವೈ.ವಿಜಯೇಂದ್ರ, ಎಂ.ಪಿ.ರೇಣುಕಾಚಾರ್ಯ, ಎಸ್.ವಿ.ರಾಮಚಂದ್ರ, ಆರ್.ಬಿ.ತಿಮ್ಮಾಪುರ, ಎಸ್.ರಾಮಪ್ಪ, ಮಾಡಾಳ ವಿರುಪಾಕ್ಷಪ್ಪ, ಎಸ್.ರಾಮಪ್ಪ, ಪ್ರೊ.ಎನ್.ಲಿಂಗಣ್ಣ ಸೇರಿದಂತೆ ಅನೇಕರು ಭಾಗವಹಿಸುವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜದ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಾರ್ಪಣೆ ನಡೆಯಲಿದೆ. ಕಾರಣ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ವಡ್ನಾಳಿನ ಶ್ರೀ ಅಷ್ಟೋತ್ತರ ಶತಶ್ರೀ ಶಂಕರಾತ್ಮನಂದ ಸರಸ್ವತಿ ಮಹಾಸ್ವಾಮೀಜಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಪಿ.ಮಹಾರುದ್ರಾಚಾರ, ಜಿಲ್ಲಾಧ್ಯಕ್ಷ ಎಂ.ಇ.ಮೌನೇಶಾಚಾರಿ, ಉಪಾಧ್ಯಕ್ಷ ಸೋಮಶೇಖರ ಇತರೆ ಪದಾಧಿಕಾರಿಗಳು ಇದ್ದರು.

admin

admin

Leave a Reply

Your email address will not be published. Required fields are marked *

error: Content is protected !!