ದಾವಣಗೆರೆಯಲ್ಲಿ ಸೆ.22ರಿಂದ 25ರ ವರೆಗೆ ಸತೀಶ ಮುಳ್ಥಳ್ಳಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಸುದ್ದಿ360 ದಾವಣಗೆರೆ, ಸೆ. 21: ಚಿತ್ರಕಲಾವಿದ ಸತೀಶ ಮುಳ್ಥಳ್ಳಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಸೆ.22ರಿಂದ 25ರ ವರೆಗೆ ನಗರದ ದೃಶ್ಯಕಲಾ ಮಹಾವಿದ್ಯಾಲಯದ ದೃಶ್ಯ ವಿಶ್ವ ಆರ್ಟ್ ಗ್ಯಾಲರಿಯಲ್ಲಿ ಏರ್ಪಡಿಸಲಾಗಿದೆ.

ಈ ಕುರಿತು ಚಿತ್ರಕಲಾವಿದ ಸತೀಶ ಮುಳ್ಳಳ್ಳಿ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದರು. ದೃಶ್ಯ ಛಂದೋಲಹರಿ ಆಶ್ರಯದಲ್ಲಿ ಆಯೋಜಿಸಿರುವ ಚಿತ್ರಕಲಾ ಪ್ರದರ್ಶನವನ್ನು ಸೆ.22ರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದ ಕಲಪತಿ ಪ್ರೊ. ಬಿ.ಟಿ. ಕುಂಬಾರ ಉದ್ಘಾಟಿಸುವರು. ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಗಿರೀಶ ಸ. ಹಿಂಡೇರ್ ಭಾಗವಹಿಸುವರು. ದೃಶ್ಯಕಲಾ ಮಹಾವಿದ್ಯಾಲಯದ ಸಂಯೋಜನಾಕಾರಿ ಡಾ. ಸತೀಶಕುಮಾರ್ ಪಿ. ವಲ್ಲೇಪುರೆ ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದರು.

ಪ್ರತಿದಿನ ಬೆಳಿಗ್ಗೆ 10.30ರಿಂದ ಸಂಜೆ 7 ಗಂಟೆಯ ವರೆಗೆ ಸಾರ್ವಜನಿಕರಿಗೆ ಚಿತ್ರಕಲೆಯನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ದೃಶ್ಯಕಲಾ ಮಹಾವಿದ್ಯಾಲಯದ ದತ್ತಾತ್ರೇಯ ಎಸ್. ಭಟ್, ಶಿವಶಂಕರ್ ಸುತಾರ್ ಇದ್ದರು.

Leave a Comment

error: Content is protected !!