ಸುದ್ದಿ360 ದಾವಣಗೆರೆ ಆ.05: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘ ಇವರ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ‘ಹರ್-ಘರ್-ತಿರಂಗಾ’ ಮನೆ ಮನೆಯಲ್ಲೂ ರಾಷ್ಟ್ರೀಯ ತ್ರಿವರ್ಣ ಧ್ವಜ ಅಭಿಯಾನಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ ಸಿಇಒ ಡಾ.ಎ.ಚನ್ನಪ್ಪ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಜಿಲ್ಲೆಯ ಸಾರ್ವಜನಿಕರು ತಮ್ಮ ತಮ್ಮ ಮನೆಯ ಅಂಗಳದಲ್ಲಿ ರಾಷ್ಟ್ರಧ್ವಜವನ್ನು ಆಗಸ್ಟ್ 13 ರಿಂದ 15 ರವರೆಗೆ ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕೆಂದು ತಿಳಿಸಿದರು. ಅಭಿಯಾನದಲ್ಲಿ ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಆಹಾರ ನಾಗರಿಕ ಮತ್ತು ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ನಜ್ಮಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರೇಷ್ಮ ಕೌಸರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ ಮತ್ತು ಸದಸ್ಯರು, ಡಿಡಿಪಿಐ ತಿಪ್ಪೇಶಪ್ಪ, ಡಿಡಿಪಿಯು ಶಿವರಾಜು.ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು ಪ್ರಾಂಶುಪಾಲರು, ಉಪನ್ಯಾಸಕರು ಭಾಗವಹಿಸಿದ್ದರು.