ಸುದ್ದಿ360 ಬೆಂಗಳೂರು, ಆ.11: ತಮ್ಮ ಮೋಹಕ ಕಂಠದಿಂದ ನಾಡಿನಾದ್ಯಂತ ಜನಪ್ರಿಯರೂ, ಕರ್ನಾಟಕ ಸುಗಮ ಸಂಗೀತದ ಪ್ರಸಿದ್ಧ ಗಾಯಕರೂ ಆಗಿದ್ದ ಶಿವಮೊಗ್ಗ ಸುಬ್ಬಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದರು.
ಕಾಡು ಕುದುರೆ ಓಡಿಬಂದಿತ್ತಾ… ಕೋಡಗನ ಕೋಳಿ ನುಂಗಿತ್ತಾ… ಬಿದ್ದಿಯಬ್ಬೇ ಮುದುಕಿ ಬಿದ್ದೀಯಬ್ಬೇ.. ಹಾಡುಗಳ ಮೂಲಕ ಮನೆಮಾತಾಗಿದ್ದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ ಇನ್ನಿಲ್ಲ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು ಎಂಬ ಖ್ಯಾತಿ ಹೊಂದಿದ್ದರು.
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿ ಇದ್ದ ಅವರು, ಗುರುವಾರ ರಾತ್ರಿ 11 ಗಂಟೆ ಹೊತ್ತಿಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದ ಅವರು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದರು.
ಗಣೇಶ್ ರಾವ್ ಹಾಗೂ ರಂಗನಾಯಕಮ್ಮನವರ ಮಗನಾದ ಸುಬ್ಬಣ್ಯ ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ 1959ರ ಡಿಸೆಂಬರ್ 14ರಂದು ಜನಿಸಿದರು.
ಸುಬ್ಬಣ್ಣನವರು 1963ರಲ್ಲಿ ಆಕಾಶವಾಣಿಯ ಗಾಯಕರಾಗಿ ಆಯ್ಕೆಯಾದರು. ಸಿನಿಮಾ ರಂಗಕ್ಕೆ ಹಿನ್ನೆಲೆ ಗಾಯಕರಾಗಿ, ನಾಟಕಕಾರ, ಚಿತ್ರ ನಿರ್ದೇಶಕ, ಕವಿ, ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ ಚಿತ್ರರಂಗ ಪ್ರವೇಶಿಸಿದರು.
1979ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ್ದರು. ಆಕಾಶವಾಣಿ ಎಂ.ಎಸ್.ಐ.ಎಲ್. ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕಾರ್ಯಕ್ರಮದಲ್ಲಿ ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿ ಮನೆ ಮನೆ ಮಾತಾದರು.
ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ, ಸಂಗೀತ ಅಕಾಡಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿದೆ. 1974ರಲ್ಲಿ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಸಂದ “ರಜತಕಮಲ” ಪುರಸ್ಕಾರ ಪಡೆದ ಹೆಗ್ಗಳಿಕೆ ಇವರದಾಗಿದೆ.