ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬೆಂಗಳೂರಿಗೆ

ಸುದ್ದಿ360 ಬೆಂಗಳೂರು, ಜೂನ್ 18: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶನಿವಾರ  ಬೆಂಗಳೂರು ಪ್ರವಾಸದಲ್ಲಿದ್ದು, ಪಕ್ಷದ ರಾಷ್ಟ್ರೀಯಒಬಿಸಿ ಮೋರ್ಚಾದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇಲ್ಲಿನ ಯಲಹಂಕ ಸಮೀಪದ ರಮಡಾ ರೆಸಾರ್ಟ್‍ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶ ಶನಿವಾರ ಮುಕ್ತಾಯವಾಗಲಿದ್ದು, ಈ ವೇಳೆ ನಡ್ಡಾ ಅವರು ಪಕ್ಷದ  ಒಬಿಸಿ ಶಾಸಕರು, ವಿಧಾನಪರಿಷತ್‍ ಸದಸ್ಯರು, ಮತ್ತು ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಿಳಿನ್‍ ಕುಮಾರ್‍ ಕಟೀಲ್‍ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‍ಸಿಂಗ್‍ ಅವರು ಭಾಗವಹಿಸಲಿದ್ದಾರೆ.

Leave a Comment

error: Content is protected !!