ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು, ತಲವಾರಿನೊಂದಿಗೆ ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ ತಲವಾರ್ ಬೀಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್, ಬಜರಂಗದಳ ಸೇರಿದಂತೆ ಸಂಘಪರಿವಾರದ ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು.
ಮೃತದೇಹ ಮೆರವಣಿಗೆ
ಪ್ರವೀಣ್ ಅವರ ಮೃತದೇಹ ಮೆರವಣಿಗೆಗೆ ಸಂಘ ಪರಿವಾರದ ಸಂಘಟನೆಗಳು ಹಾಗೂ ಪ್ರವೀಣ್ ಬಂಧುಗಳು ನಿರ್ದರಿಸಿದ್ದು, ಬುಧವಾರ ಬೆಳಿಗ್ಗೆ 9.30ಕ್ಕೆ ಪುತ್ತೂರು ನಗರದಿಂದ ಹೊರಡುವ ಮೆರವಣಿಗೆ ದರ್ಬೆ, ಸವಣೂರು, ಕಾಣೀಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆ ತಲುಪಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ ಕಡಬ, ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳು ಪ್ರಮುಖರು ಕರೆ ಕೊಟ್ಟಿದ್ದಾರೆ.