ಸುದ್ದಿ360ದಾವಣಗೆರೆ: ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಿಂದ ಈ ಕೃತ್ಯ ಬೆಳಕಿಗೆ ಬಂದಿದ್ದು, ನಗರದ ರಾಮ ಮಂದಿರ ಪಾರ್ಕ್ ಬಳಿ ಜು.7ರಂದು ನಿಲ್ಲಿಸಿದ್ದ ಬೈಕ್ ಕಳುವಾದ ಬಗ್ಗೆ ಪವನ್ ಎಂಬುವರು ಬಡಾವಣೆ ಠಾಣೆಗೆ ದೂರು ನೀಡಿದ್ದರು.
ನಗರವಾಸಿ ಶಾಹೀದ್(21)ಬಂಧಿತ ಆರೋಪಿಯಾಗಿದ್ದು, ಈತನಿಂದ 1.30 ಲಕ್ಷ ರೂ. ಮೌಲ್ಯದ ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮಾನಸ್ಪದವಾಗಿ ಓಡಾಡುತ್ತಿದ್ದ ಈತನನ್ನು ತಡೆದು ವಿಚಾರಿಸಿದಾಗ ಕಳ್ಳತನ ಒಪ್ಪಿಕೊಂಡಿದ್ದಾನೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಿ. ಬಸರಗಿ, ನಗರ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನಲ್ಲಿ, ಪೊಲೀಸ್ ನಿರೀಕ್ಷಕ ಧನಂಜಯ ನೇತೃತ್ವದಲ್ಲಿ ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲತಾ, ಸಿಬ್ಬಂದಿ ಧನಂಜಯ, ರಾಜು ಅರಸು, ವಿಶ್ವಕುಮಾರ, ಸಿದ್ದೇಶ್, ಅರುಣ ಕುಮಾರ, ಸೈಯದ್ ಅಲಿ, ಹನುಮಂತಪ್ಪ, ಎಚ್. ಗೀತಾ ಒಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ. ಸಿಬ್ಬಂದಿ ಕಾರ್ಯವನ್ನು ಎಸ್ಪಿ ಶ್ಲಾಘಿಸಿದ್ದಾರೆ.