ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಪ್ರತಿಭಟನೆ

ಸುದ್ದಿ360 ದಾವಣಗೆರೆ ಜೂ.22: ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟದಿಂದ ಜೂ.೨೨ ಬೆಳಿಗ್ಗೆ ೧೧ ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮತ್ತು ಭಿತ್ತಿಪತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಇಂದು ಜಯದೇವ ವೃತ್ತದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಬ್ಯಾಂಕ್ ನಿವೃತ್ತರ ಒಕ್ಕೂಟದ ನಾಯಕ ಕೆ.ವಿಶ್ವನಾಥ ನಾಯ್ಕ, ಅಖಿಲ ಭಾರತ ಕಾರ್ಪೊರೇಷನ್ ಬ್ಯಾಂಕ್ ನಿವೃತ್ತರ ಸಂಘದ ಅಧ್ಯಕ್ಷ ಕೆ.ರಾಮಪ್ರಿಯಾ, ಯು.ಅಬ್ದುಲ್ ಜಲೀಲ್, ಸಂಧ್ಯಾರಾವ್, ರಾಘವೇಂದ್ರ ನಾಯರಿ, ಎಸ್.ಟಿ.ಶಾಂತಗಂಗಾಧರ್, ಜಿ.ಬಿ.ಶಿವಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

Leave a Comment

error: Content is protected !!