ಮಂಕಿಪಾಕ್ಸ್ : ನಾಳೆ ಮಹತ್ವದ ಸಭೆ

ಸುದ್ದಿ360 ದಾವಣಗೆರೆ, ಆ. 01: ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ನಾಳೆ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ  ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಶೇಷವಾಗಿ ಪ್ರಯಾಣಿಕರ ತಪಸಾಣೆ ಮತ್ತು ಬೇರೆ ಬೇರೆ ಕ್ರಮಗಳ ಬಗ್ಗೆ ನಾಳೆ ಮಹತ್ವದ ಸಭೆಯನ್ನು ಆರೋಗ್ಯ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗುವುದು. ಈ ವೇಳೆ ಮಂಕಿಪಾಕ್ಸ್ ಬಗ್ಗೆ ಕೆಲವು ನಿರ್ದೇಶನ ಮತ್ತು ಔಷಧಿ ವ್ಯವಸ್ಥೆಗಳ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದರು.

Leave a Comment

error: Content is protected !!