ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್‍ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್‍ ಸೂಚನೆ

ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 15) ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 56 ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

admin

admin

Leave a Reply

Your email address will not be published. Required fields are marked *

error: Content is protected !!