ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ

ಸುದ್ದಿ360, ದಾವಣಗೆರೆ, ಏ. 24:  ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ‘ಡಿಕೆಶಿ ಹೇಳುವುದು ಒಂದು ಮಾಡೋದು ಒಂದು, ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ.’ ಎಂದರು.

ತೋರಿಕೆಗಾಗಿಯಾದರೂ ಲಿಂಗಾಯತ ಮಠಕ್ಕೆ ಹೋಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಧನ್ಯವಾದಗಳು.

-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ‌. ಹಿಂದೆಯೂ  ಹೈಕಮಾಂಡ್ ತೀರ್ಮಾನ ಮಾಡಿದ್ದು,  ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ .

ಪುತ್ರನ ಪರ ಮಾಡಾಳ್ ವಿರುಪಾಕ್ಷಪ್ಪ ಪ್ರಚಾರ ಮಾಡುತ್ತಿರುವುದರ ಕುರಿತು, ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

Leave a Comment

error: Content is protected !!