ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ

ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮುಸ್ತಕ್ ಅಹಮದ್ ಶೇಕ್ ಕರೆ

ಸುದ್ದಿ360 ದಾವಣಗೆರೆ, ಆ. 10: ನಗರದ ನಿಂಚನ ಪಬ್ಲಿಕ್ ಸ್ಕೂಲ್ ನಲ್ಲಿ ಇತ್ತಿಚೆಗೆ ನಡೆದ 2022-23 ನೇ ಸಾಲಿನ ವಿದ್ಯಾರ್ಥಿಗಳಿಗೆ ಶಾಲಾ ಮಂತ್ರಿ ಮಂಡಲ ರಚನೆ ಗೆ ಚುನಾವಣೆ ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮುಸ್ತಕ್ ಅಹಮದ್ ಶೇಕ್ ಮುಖ್ಯ ಅತಿಥಿ ಗಳಾಗಿ ಭಾಗವಾಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಗುಣಬೆಳಸಿಕೊಳ್ಳಬೇಕು ಮತ್ತು ಸತತ ಪ್ರಯತ್ನದಿಂದ ಯಶಸ್ಸು ಸಾಧಿಸವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಾಲೆಯ ಸಂಸ್ಥಾಪಕ ಅಧ್ಯಕ್ಷ ರಾದ  ಎಸ್. ನಿಂಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ   ಗುರುಹಿರಿಯರಿಗೆ ಗೌರವಕೊಡಬೇಕು. ವಿಧ್ಯಾರ್ಥಿ ಜೀವನದಿಂದಲೇ ಹೋರಾಟ ಮತ್ತು ನಾಯಕತ್ವ ಗುಣಬೆಳಸಿಕೊಳ್ಳಬೇಕು. ನಾಯಕತ್ವ ಗುಣ ಬೇಳಸಿಕೊಂಡಾಗ ಮಾತ್ರ ಸಮಾಜದಲ್ಲಿ ಸುಂದರ ಬದುಕು ಕಟ್ಟಿಕೊಳ್ಳಬಹುದು. ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ನೀಡಬೇಕು. ಶಿಕ್ಷಣದಿಂದಲೇ ನಾವು ಒಬ್ಬ ಸಮರ್ಥ ನಾಯಕನಾಗಲು ಸಾದ್ಯ. ಎಲ್ಲರು ಉನ್ನತಮಟ್ಟದ ಶಿಕ್ಷಣ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ  ನಸ್ರಿನ್ ಖಾನ್, ರೂಪ. ಎಮ್. ಎಸ್, ಆಸೀಫ್ ಖಾನ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!