ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ – ಮಾರಕಾಸ್ತ್ರಗಳು ಪೊಲೀಸರ ವಶ

ಸುದ್ದಿ360  ಶಿವಮೊಗ್ಗ ಜು.27: ನಗರದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಮಾಡಿದ್ದು, 50 ಚೆಕ್ ಪೋಸ್ಟ್ ಗಳನ್ನು ತೆರೆದು ಪರಿಶೀಲನೆ ನಡೆಸಲಾಗಿದ್ದು ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಅನುಮಾನಾಸ್ಪದವಾಗಿ ಓಡಾಡುವ 30 ವರ್ಷದೊಳಗಿನ ಯುವಕರ ವಾಹನ ಮತ್ತು ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಈಗಾಗಲೆ ಅಪರಾಧ ಹಿನ್ನೆಲೆ ಇರುವವರ ಮನೆಗಳ ತಪಾಸಣೆ ನಡೆಸಿ ಹಾಗೂ ನಗರದ ವೈನ್ ಶಾಪ್ ಸುತ್ತ, ನಿರ್ಜನ ಪ್ರದೇಶಗಳಲ್ಲಿ ಕುಡಿದು ಜನರಿಗೆ ತೊಂದರೆ ಕೊಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, 11 ಅಬಕಾರಿ ಪ್ರಕರಣಗಳು, 350 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು, 93 ಲಘು ಪ್ರಕರಣಗಳು, 96 ತಂಬಾಕು ಪ್ರಕರಣಗಳು, 10 ಗಾಂಜಾ ಸೇವನೆ ಮಾಡಿದ ಜನರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ. 1 ತಲ್ವಾರ್, 4 ಹರಿತವಾದ ಡ್ಯಾಗರ್ ಗಳನ್ನೂ ವಶಕ್ಕೆ ಪಡೆದು ಕಾನೂನು ರೀತಿ ಕ್ರಮ ಕೈಗೊಂಡಿದ್ದಾರೆ.

ಈ ಕಾರ್ಯಾಚರಣೆಯು ನಿರಂತರವಾಗಿ ನಡೆಯುತ್ತಿದ್ದು, ಇವತ್ತಿನ ದಿನ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ, ಸಿಬ್ಬಂದಿ ನಿಯೋಜಿಸಿ ಒಂದು ಗಂಟೆಗಳ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Leave a Comment

error: Content is protected !!