ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದಿಂದ ಬಿ.ಎಸ್. ಜಗದೀಶ್ ಜನ್ಮದಿನಾಚರಣೆ

ಸುದ್ದಿ360 ದಾವಣಗೆರೆ ಜ.3: ಶ್ರೀ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ವತಿಯಿಂದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಅವರ ಹುಟ್ಟುಹಬ್ಬವನ್ನು ಜ.5ರಂದು ಸಂಜೆ 6 ಗಂಟೆಗೆ ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ-ಆಫ್ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವುದಾಗಿ ಮಾಜಿ ಮಹಾಪೌರರಾದ ಪಿ.ಎಸ್. ಜಯಣ್ಣ ತಿಳಿಸಿದರು.

ಬಿ.ಎಸ್. ಜಗದೀಶ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಕ ಕೆ.ಬಿ. ಶಂಕರನಾರಾಯಣ ಅವರು ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ, ಸಂಸದರಾದ ಡಾ. ಜಿ.ಎಂ. ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ  ಎಸ್.ಎಂ. ವೀರೇಶ್ ಹನಗವಾಡಿ, ಶಾಸಕರಾದ, ಎಸ್‍.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಪ್ರೊ. ಎನ್‍. ಲಿಂಗಣ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ. ನಂದೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಸೇರಿದಂತೆ ಇತರರು ಭಾಗವಹಿಸಲಿದ್ದು, ‘ಯುವಜನ ಮತ್ತು ರಾಷ್ಟ್ರಭಕ್ತಿ’ ಕುರಿತಾಗಿ ಸಮಾಜ ಚಿಂತಕರಾದ ಜಗನ್ನಾಥ್ ನಾಡಿಗರ್ ಸ್ಪೂರ್ತಿದಾಯಕ ನುಡಿಗಳನ್ನಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಹಿರಿಯರಿಗೆ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿರಾಜ್ಯ ಕಾರ್ಯಕಾರಿಣಿ ಸದಸ್ಯ ಹೇಮಂತಕುಮಾರ್, ಮಾಜಿ ಮೇಯರ್ ಹೆಚ್.ಎನ್. ಗುರುನಾಥ್, ಬಿಜೆಪಿ ಮುಖಂಡರಾದ ಕೆ. ಮುಕುಂದಪ್ಪ, ಟಿ.ಎಂ. ಕಾಂತರಾಜು, ಹೆಚ್.ಜಿ.ಗಣೇಶಪ್ಪ, ಯುವ ಮುಖಂಡ ಗುರುರಾಜ್ ಕೆ.ವಿ. ಇದ್ದರು.

Leave a Comment

error: Content is protected !!