‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’

ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಧ್ಯಮದವರಿಗೆ ಪ್ರತಿಕ್ರಿಯಿಸಿದರು.

ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ನಗರದ ಬಾಪೂಜಿ ಕಾಲೇಜು ಗ್ರೌಂಡ್ನಲ್ಲಿ ಸಿದ್ಧರಾಮಯ್ಯನವರು ಹೆಲೆಕಾಪ್ಟರ್ನಿಂದ ಇಳಿಯುತ್ತಿದ್ದ ಹಾಗೆ ಚಾಮುಂಡೇಶ್ವರಿ ತಾಯಿ ಸುಪುತ್ರ, ಮುಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದು ಘೋಷಣೆಗಳನ್ನು ಕೂಗುವ ಮೂಲಕ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಅವರನ್ನು ಬರಮಾಡಿಕೊಂಡರು.

ಸಿದ್ಧರಾಮಯ್ಯನವರನ್ನು ನಗರಕ್ಕೆ ಬರಮಾಡಿಕೊಳ್ಳುವುದರಲ್ಲಿ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಗೈರು ಕಳೆಗುಂದಿಸಿತ್ತು.

Leave a Comment

error: Content is protected !!