ಎಸ್ಸೆಸ್ಸೆಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಮೇಯರ್ ಎಚ್ಚರಿಕೆ

ಸುದ್ದಿ360  ದಾವಣಗೆರೆ ಡಿ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಒಡೆತನದ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಸಾಕಣೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ


ಎಸ್ಸೆಸ್ಸೆಂ ಒಡೆತನದ ಕಲ್ಲೆಶ್ವರ ರೈಸ್‌ಮಿಲ್ ಆವರಣದಲ್ಲಿ ಅಕ್ರಮವಾಗಿ ಸಾಕಣೆ ಮಾಡಿದ್ದ ಜಿಂಕೆ, ಕೃಷ್ಣಮೃಗ, ನರಿ, ಮುಂಗುಸಿ, ಕಾಡುಹಂದಿ, ಗೌಜುಗ ಸಏರಿದಂತೆ ಸುಮಾರು ೩೦ಕ್ಕೂ ಅಧಿಕ ವನ್ಯಜೀವಿಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರಷ್ಟೇ ಹೊರತಾಗಿ ತಪ್ಪಿತಸ್ಥರನ್ನು ಇದುವರೆಗೂ ಬಂಧಿಸಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.


ವನ್ಯಜೀವಿ ಸಂರಕ್ಷಣೆ ಕಾಯ್ದೆಯ ಅಡಿಯಲ್ಲಿ ವನ್ಯಜೀವಿಗಳ ಸಾಕಣೆ, ಬೇಟೆ, ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ. ಆದ್ದರಿಂದ ಸಿಸಿಬಿ ಪೊಲೀಸರು, ಅರಣ್ಯ ಅಧಿಕಾರಿಗಳು ಯಾವುದೇ ಒತ್ತಡಕ್ಕೂ ಮಣಿಯದೇ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಎ೧ ಆರೋಪಿ ಎಂದು ಪರಿಗಣಿಸಿ, ಅವರನ್ನು ಕೂಡಲೇ ಬಂಧಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಅವರು ಸಿಎಂಗೆ ಮನವಿ ಮಾಡಿದ್ದಾರೆ.

 
ಒಂದು ವೇಳೆ ಅಧಿಕಾರಿಗಳು ಒತ್ತಡಕ್ಕೆ ಮಣಿದು ಅಕ್ರಮವಾಗಿ ವನ್ಯಜೀವಿಗಳನ್ನು ಅಡಗಿಸಿಟ್ಟ ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲು ಮೀನಮೇಷ ಎಣಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!