ಓಪಿಎಸ್: ಹೈಕಮಾಂಡ್‍ನೊಂದಿಗೆ ಚರ್ಚೆ – ಸಿದ್ಧರಾಮಯ್ಯ

ಸುದ್ದಿ360  ದಾವಣಗೆರೆ ಡಿ.25: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ರದ್ದುಗೊಳಿಸಿ  ಓಪಿಎಸ್ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರು ರಾಜಧಾನಿಯ ಸ್ವಾತಂತ್ರ್ಯ  ಉದ್ಯಾನವನದಲ್ಲಿ ಹಮ್ಮಿಕೊಂಡಿರುವ

ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿ ನಿರತರ ಅಹವಾಲು ಸ್ವೀಕರಿಸಿ ಮಾತನಾಡಿದರು.

ನಾನ್ನ ಅಧಿಕಾರಾವಧಿಯಲ್ಲಿ  ಓಪಿಎಸ್ ಜಾರಿ ಮಾಡಲು ಸಾಧ್ಯವಿಲ್ಲ ಎಂದು ನಾನು ಹೇಳಿದ್ದೆ. ಆದರೆ ಈಗ ಕಾಲ ಬದಲಾಗಿದೆ. ಈಗಾಗಲೇ ಹಿಮಾಚಲ ಪ್ರದೇಶ, ಅಸ್ಸಾಂ, ಜಾರ್ಖಂಡ್ನಲ್ಲಿ ಓಪಿಎಸ್ ಜಾರಿಗೆ ತರಲಾಗಿದೆ.  ಸರ್ಕಾರಿ ನೌಕರರ ಹಕ್ಕು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ ಆದಷ್ಟು ಬೇಗ ನಮ್ಮ ನಿರ್ಣಯ ತಿಳಿಸಲಾಗುವುದು. ನಿಮ್ಮೊಂದಿಗೆ ನಾವಿದ್ದೇವೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಓಪಿಎಸ್ ಜಾರಿಗೆ ಕ್ರಮ ಕೈಗೊಳ್ಳಲಾಗುವುದು  ಎಂಬ ಭರವಸೆಯನ್ನು ನೀಡಿದ್ದಾರೆ.

Leave a Comment

error: Content is protected !!