ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ.
ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಇಲ್ಲವೇ ಗುಂಡಿಟ್ಟು ಕೊಲ್ಲಬೇಕು. ತಪ್ಪಿದಲ್ಲಿ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹಂತಕರಿಗೆ ಶಿಕ್ಷೆ ಕೊಡುವ ಮೂಲಕ ಹತ್ಯೆಗೀಡಾದ ಕನ್ನಯ್ಯಲಾಲ್ ಆತ್ಮಕ್ಕೆ ಶಾಂತಿ ಕೋರಬೇಕಿದೆ. ರಾಜಸ್ತಾನ ಸರ್ಕಾರ ಕ್ರಮ ಕೈಗೊಳ್ಳದೇ ಹೋದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಒತ್ತಾಯ ಮಾಡಲಿದೆ. ಅಮಾನುಷ ಕೃತ್ಯ ಮಾಡಿದ ಕಟುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಲ್ಲವೇ ಗುಂಡು ಹೊಡೆದು ಹಂತಕರ ಕಥೆ ಮುಗಿಸಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.