ಕಾಂಗ್ರೆಸ್ ನ್ನು ಜನರೇ ಮನೆಗೆ ಚಲೋ ಮಾಡಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16:  ಭ್ರಷ್ಟಾಚಾರ ಪ್ರಕರಣದ ತನಿಖೆ ವಿರುದ್ದ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತವೇ ಸರಿ. ಕಾಂಗ್ರೆಸ್‍ನ ಇಂತಹ ನಿರ್ಧಾರಗಳಿಂದ ಜನರೇ ಕಾಂಗ್ರೆಸ್ ನ್ನು ಮನೆಗೆ ಚಲೋ ಮಾಡಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದರು.

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳು. ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಎದುರಾದ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿ ನಿರ್ದೇಶನಾಲಯ ಕಾಂಗ್ರೆಸ್  ಮುಖಂಡರಿಗೆ ವಿಚಾರಣೆಗೆ ಆಗಮಿಸುವಂತೆ ನೋಟೀಸ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನವರು ರಾಜಭವನ ಚಲೋ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತ. ಕಾಂಗ್ರೆಸ್‍ನ  ಈ ನಡೆ ಕಾನೂನು ಬಾಹಿರ ಎಂದರು.

ಮೇಕೆದಾಟು ರಾಜ್ಯಕ್ಕೆ ನ್ಯಾಯ ದೊರೆಯುವ ವಿಶ್ವಾಸ

ಮೇಕೆ ದಾಟು ಯೋಜನೆ ಕುರಿತಂತೆ ಸುಪ್ರೀಂ ಕೋರ್ಟ್‍ನಿಂದ ಯಾವುದೇ ತಡೆಯಾಜ್ಞೆ ಇಲ್ಲ. ಈಗಾಗಲೇ ಸಿಡ್ಲ್ಯೂಎಂಎ ಜೊತೆ ಮಾತುಕತೆ ನಡೆಸಲಾಗಿದೆ ಅಲ್ಲದೆ ಸಿಡಬ್ಲ್ಯೂಎಂಎಗೆ ಅಧಿಕಾರಿವಿದ್ದು, ಮುಂದಿನ ವಾರ ಸಭೆ ಕರೆಯುವ ಸಾಧ್ಯತೆ ಇದೆ. ನಮ್ಮ ವಾದವನ್ನು ನಾವು ಮಂಡಿಸಿದ್ದೇವೆ. ಡಿಪಿಆರ್‍ ಆಗುವ  ವಿಶ್ವಾಸವಿದ್ದು, ನಮಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದರು. ತಮಿಳುನಾಡು ಸಚಿವರು ಪ್ರಧಾನಿಗೆ ಪತ್ರ ಬರೆದಿರುವುದಾಗಿ ಹೇಳಿರುವ  ವಿಚಾರಕ್ಕೆ ಉತ್ತರಿಸುವ ಅವಶ್ಯಕತೆ ಇಲ್ಲ. ಈ ವಿಷಯದಲ್ಲಿ ಕೇಂದ್ರೀಯ ಜಲ ಆಯೋಗದ ನಿರ್ಧಾರವೇ ಅಂತಿಮ. ಮೇಕೆದಾಟು ಬಳಿ ಕಾಮಗಾರಿ ನಡೆಸುವ ಕುರಿತು ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಮೀಸಲಾತಿ ವರದಿಯನ್ವಯ ಚುನಾವಣೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಮೀಸಲಾತಿ ನಿಗಧಿ ಪಡಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಲಾಗಿದೆ ಪ್ರಕ್ರಿಯೆ ನಡೆಯುತ್ತಿದೆ. ಮೊದಲನೇ ಹಂತದಲ್ಲಿ ಬಿಬಿಎಂಪಿ ಚುನಾವಣೆ ಕುರಿಂತಂತೆ ಮೀಸಲಾತಿ ನಿಗಧಿ ಪಡಿಸಲಾಗುವುದು. ಆದಾದ ನಂತರ ರಾಜ್ಯದ ಎಲ್ಲಾ ಜಿ.ಪಂ, ತಾ.ಪಂ ಗಳ ಚುನಾವಣೆಗೆ ಹಿಂದುಳಿದ ವರ್ಗಗಳ ಆಯೋಗ ನೀಡುವ ಮೀಸಲಾತಿ ವರದಿಯನ್ವಯ ಚುನಾವಣೆ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಶಾಸಕ ಎಸ್.ಎ ರವೀಂದ್ರನಾಥ್, ಮಾಡಾಳು ವಿರೂಪಾಕ್ಷಪ್ಪ, ಮೇಯರ್ ಜಯಮ್ಮ ಗೋಪಿನಾಯ್ಕ್, ಎಸ್.ವಿ ರಾಮಚಂದ್ರ, ಪೂರ್ವವಲಯ ಐಜಿಪಿ ಕೆ.ತ್ಯಾಗರಾಜನ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ ಸಿಇಒ ಡಾ.ಎ ಚನ್ನಪ್ಪ, ಎಸ್ಪಿ ಸಿ.ಬಿ. ರಿಷ್ಯಂತ್, ಎಎಸ್ ಪಿ ರಾಮಗೊಂಡ ಬಸರಗಿ, ದೂಡಾ ಆಯುಕ್ತ ಬಿ.ಟಿ ಕುಮಾರಸ್ವಾಮಿ, ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಸ್ಮಾರ್ಟ್ ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ, ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ, ಮಾಜಿ ಮುಖ್ಯ ಸಚೇತಕ ಡಾ.ಎ.ಹೆಚ್ ಶಿವಯೋಗಿ ಸ್ವಾಮಿ ಹಾಗೂ ಇತರರು ಹಾಜರಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!