ಸುದ್ದಿ360 ಬೆಂಗಳೂರು ಮಾ.16: ಕೆ.ಪಿ.ಟಿ. ಸಿ.ಎಲ್ ನೌಕರರು ಮತ್ತು ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಇಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕೆ.ಪಿ.ಟಿ. ಸಿ.ಎಲ್ ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ
ಸಾರಿಗೆ ಇಲಾಖೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು.