ಜಲಸಿರಿ ಯೋಜನಾ ಅನುಷ್ಠಾನ ಸಭೆ

ಸುದ್ದಿ360, ದಾವಣಗೆರೆ, ಜು.15: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಜಲಸಿರಿ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ನೀರು ಸರಬರಾಜು ಹಾಗೂ ನಿರಂತರ ನೀರು ಸರಬರಾಜು ಕಾಮಗಾರಿಯ ಪ್ರಗತಿ ಪರಿಶೀಲನಾ ಹಾಗೂ ಕಾಮಗಾರಿಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯನ್ನು ಜುಲೈ.15 ರಂದು ನಡೆಯಲಿದೆ.

ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಜಿ.ಎಂ ಸಿದ್ದೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕೆ.ಯು.ಐ.ಡಿ.ಎಫ್.ಸಿ ಬೆಂಗಳೂರು, ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಕಚೇರಿಯ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ ಎಂದು ಕೆ.ಯು.ಐ.ಡಿ.ಎಫ್.ಸಿ ಉಪ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!