ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಕಾರ್ಯಕ್ರಮ
ಸುದ್ದಿ360,ದಾವಣಗೆರೆ, ಜುಲೈ 20: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜು.16ರಂದು ನಡೆದ ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ ಬಹಳ ಅದ್ದೂರಿಯಿಂದ ಆಚರಿಸಲ್ಪಟ್ಟಿತು. ಈ ಕಾರ್ಯಕ್ರಮವನ್ನು ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 783 ಆಫರ್ಸ್ ಸ್ವೀಕರಿಸಿದ್ದು, ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಜಿಎಂಐಟಿ ಸಂಸ್ಥೆಯು ಜಿಟಿಟಿ ಎಫ್ ಸಂಸ್ಥೆಯೊಡನೆ ಕೈಜೋಡಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಂಸೆ ಪ್ರಮಾಣಪತ್ರ ಮತ್ತು ಉಡುಗೊರೆಯನ್ನು ಕೊಡುವುದರ ಮೂಲಕ ಗೌರವಿಸಲಾಯಿತು.
ಗೌರವವನ್ನು ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿಗಳು ಜಿಎಂಐಟಿ ಸಂಸ್ಥೆಗೆ ಮತ್ತು ಜಿಟಿಟಿಎಫ್ ಸಂಸ್ಥೆಗೆ ಅಭಿನಂದನೆಗಳನ್ನು ತಿಳಿಸಿದರು. ಎಲ್ಲಾ ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದು ನೋಡುಗರಲ್ಲಿ ಹರ್ಷವನ್ನುಂಟು ಮಾಡಿತ್ತು. ಹಬ್ಬದ ವಾತಾವರಣವನ್ನು ಸೃಷ್ಟಿಸಿದ ಅನುಭವ ಎಲ್ಲರಿಗಾಗಿತ್ತು.
ಜಿಟಿಟಿಎಫ್ ಸಂಸ್ಥೆಯಿಂದ ರಾಹುಲ್ ಪವರ್- ಸೀನಿಯರ್ ಮ್ಯಾನೇಜರ್, ಅಮಿತ್ ಭೋಸಲೆ- ಡೈರೆಕ್ಟರ್ ಆಪರೇಷನ್ ಮತ್ತು ನವನೀತ್ ಕುಮಾರ್- ಯುನಿವರ್ಸಿಟಿ ಅಲಯನ್ಸ್ ಮ್ಯಾನೇಜರ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಮಾತನಾಡಿ, ವಿದ್ಯಾಭ್ಯಾಸ ಮುಗಿಸಿ ಸಂಸ್ಥೆಯಿಂದ ಹೊರಹೋಗುವ ಎಲ್ಲಾ ವಿದ್ಯಾರ್ಥಿಗಳಿಗೂ ಉದ್ಯೋಗ ನೀಡುವ ಗುರಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ತರಬೇತಿ ಮತ್ತು ಉದ್ಯೋಗ ವಿಭಾಗವು ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರ ತೇಜಸ್ವಿ ಕಟ್ಟಿಮನಿ ಟಿ ಆರ್ ಮಾತನಾಡಿ, ಆಯ್ಕೆಯಾದ ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಮತ್ತು ಮುಂದಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳನ್ನು ತಯಾರು ಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದಕ್ಕೆ ಪೂರಕವಾಗಿ ಜಿಟಿಟಿಎಫ್ ಸಂಸ್ಥೆಯು ಕೈಜೋಡಿಸಿದ್ದು ಹರ್ಷವನ್ನುಂಟು ಮಾಡಿದೆ ಎಂದು ತಿಳಿಸಿದರು. ಸಂಸ್ಥೆಯೊಡನೆ ವಿದ್ಯಾರ್ಥಿಗಳು ಒಡನಾಟ ಹೊಂದುವುದರ ಮೂಲಕ ಸಂಸ್ಥೆಯ ಏಳಿಗೆಗೆ ಸಹಕರಿಸಬೇಕಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಅತ್ಯುತ್ತಮ ಮೂರು ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರುಗಳಿಗೆ ವಿಶೇಷವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಕು. ಸುಚಿತ್ರ ಹಿರೇಗೌಡರ್ ಮತ್ತು ಕು. ಪೂಜಾ ನೆರವೇರಿಸಿಕೊಟ್ಟರು. ವಿದ್ಯಾರ್ಥಿಗಳು ಭರತನಾಟ್ಯದ ಮೂಲಕ ಗಣ್ಯರನ್ನು ವೇದಿಕೆಗೆ ಕರೆತಂದಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ ಸಂಪೂರ್ಣ ಸಂಯೋಜನೆಯನ್ನು ಇನ್ಫಾರ್ಮಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದ ಅಧ್ಯಾಪಕರಾದ ಅಮಿತ್ ಶೇಖರ್ ಸಿ ವಹಿಸಿದ್ದರು.