ಜೂ.18ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ

ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜಿನಿಂದ ಕಾರ್ಯಕ್ರಮ ಆಯೋಜನೆ

ಸುದ್ದಿ360 ದಾವಣಗೆರೆ, ಜೂ16: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜೂ.೧೮ರಂದು ಬೆಳಗ್ಗೆ ೯.೩೦ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಎಂ . ಹಾಲಮ್ಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸಿಇಒ ಡಾ.ವಿ. ವೆಂಕಟರಾಯಡು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಸಮಾರಂಭದಲ್ಲಿ ದಾವಣಗೆರೆ ಒಳಗೊಂಡಂತೆ ಸುತ್ತಮುತ್ತಲ ಜಿಲ್ಲೆಯ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.೧೦೦ ಫಲಿತಾಂಶ ಪಡೆದ ೧೦೦ ಶಾಲೆಗಳ ಮುಖ್ಯಸ್ಥರನ್ನು ಸನ್ಮಾನಿಸಲು ನಿರ್ಧರಿಸಲಾಗಿದೆ. ಸಂಸದ ಜಿ.ಎಂ. ಸಿದ್ದೇಶ್ವರ ಸಮಾರಂಭ ಉದ್ಘಾಟಿಸುವ ಜತೆಗೆ ಶಾಲೆಗಳ ಮುಖ್ಯಸ್ಥರಿಗೆ ಪ್ರಶಸ್ತಿ ವಿತರಿಸುವರು ಎಂದು ಹೇಳಿದರು.

ಈಗಾಗಲೇ ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಹಾವೇರಿ, ಶಿವಮೊಗ್ಗ, ತುಮಕೂರು ಸೇರಿ ಹಲವು ಜಿಲ್ಲೆಗಳ ೧೫೦ಕ್ಕೂ ಅಧಿಕ ಸರಕಾರಿ ಹಾಗೂ ಖಾಸಗಿ ಶಾಲೆಗಳು ಪ್ರಶಸ್ತಿಗಾಗಿ ನೋಂದಣಿ ಮಾಡಿಕೊಂಡಿವೆ. ಈ ಪೈಕಿ ೧೦೦ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರಶಸ್ತಿ ಆಯ್ಕೆಗೆ ಫಲಿತಾಂಶ ಮೊದಲ ಮಾನದಂಡವಾಗಿದ್ದು, ಶಾಲೆಯಲ್ಲಿನ ಬೋಧನಾ ಗುಣಮಟ್ಟ, ಕ್ರಿಯಾತ್ಮಕ ವಿಷಯಗಳೊಂದಿಗೆ ನೀಡುವ ಶಿಕ್ಷಣ ಮೊದಲಾದ ಅಂಶಗಳನ್ನು ಪರಿಗಣಿಸಲಾಗುವುದು. ಪ್ರಶಸ್ತಿಗೆ ಆಯ್ಕೆಯಾಗುವ ಎಲ್ಲಾ ಶಾಲೆಗಳ ಪ್ರಾಂಶುಪಾಲರು ಹಾಗೂ ಅಧ್ಯಕ್ಷರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ಲೇಸ್‌ಮೆಂಟ್ ವಿಭಾಗದ ಮುಖ್ಯಸ್ಥ ಟಿ.ಆರ್. ತೇಜಸ್ವಿ ಕಟ್ಟೀಮನಿ ಗೋಷ್ಠಿಯಲ್ಲಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!