ಟ್ರೈನರ್‍ಗಳಿಂದ ಅರ್ಜಿ ಆಹ್ವಾನ

ಸುದ್ದಿ360 ಶಿವಮೊಗ್ಗ, ಸೆ.15: ಯುವ ಸಬಲೀಕರಣ ಇಲಾಖೆ ವತಿಯಿಂದ ನಿರ್ವಹಣೆ ಮಾಡುತ್ತಿರುವ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಲ್ಲಿನ ಕ್ರೀಡಾಪಟುಗಳಿಗೆ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ ತರಬೇತಿ ನೀಡಲು ನುರಿತ ಟ್ರೈನರ್‍ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಯಲ್ಲಿ ಎನ್‍ಐಎಸ್ ಸರ್ಟಿಫಿಕೇಟ್ ಕೋರ್ಸ್ ಅಥವಾ ಸರ್ಕಾರದಿಂದ ಅಂಗೀಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಈ ಕ್ರೀಡೆಗಳಲ್ಲಿ ಅಂತರಾಷ್ಟ್ರ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪದಕ ವಿಜೇತರಾದವರು ಅರ್ಜಿ ಸಲ್ಲಿಸಬಹುದು. ಕನಿಷ್ಟ 21 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆ ತಾತ್ಕಾಲಿಕವಾಗಿದ್ದು, ಆಯ್ಕೆಯಾದ ಟ್ರೈನರ್‍ಗಳು 2023 ರ ಮಾರ್ಚ್‍ವರೆಗೆ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಿದ್ದರಿರಬೇಕು. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿ ಸೆಪ್ಟೆಂಬರ್ 20 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!