ದಾವಣಗೆರೆ, ಮೇ ೨೩: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಮೂಲಕ ಅತ್ಯಂತ ಕಡಿಮೆ ಖರ್ಚಿನಲ್ಲಿ ತಾಂತ್ರಿಕ ಶಿಕ್ಷಣ ಪಡೆಯಬಹುದಾಗಿದ್ದು, ನಗರದ ಡಿಆರ್‌ಆರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿರುವುದಾಗಿ ಪ್ರಾಂಶುಪಾಲ ಜಿ.ಬಿ. ಸದಾನಂದಪ್ಪ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಆಸಕ್ತರು ಮೇ ೨೬ರೊಳಗೆ ಅರ್ಜಿ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಅರ್ಜಿ ಸ್ವೀಕರಿಸಲಾಗುತ್ತಿದೆ. ವಿದ್ಯಾರ್ಥಿಗಳು ತಾವು ಗಳಿಸಿರುವ ಅಂಕದ ಆಧಾರದಲ್ಲಿ ಸೀಟು ಹಂಚಿಕೆ ಮಾಡಲಾಗುವುದು. ಬಳಿಕವೂ ಸೀಟುಗಳು ಉಳಿದರೆ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಅವಕಾಶ ನೀಡಲಾಗುವುದು ಎಂದರು.
ಇಂಜಿನಿಯರಿಂಗ್ ಹೊರತಾದ ಕಮರ್ಷಿಯಲ್ ಪ್ರಾಕ್ಟೀಸ್ ಕನ್ನಡ ಹಾಗೂ ಇಂಗ್ಲಿಷ್ ಕೋರ್ಸ್‌ಗೆ ತಲಾ ೪೨ ಸೀಟುಗಳಿಗೆ ನೇರ ಪ್ರವೇಶ ಅವಕಾಶ ಇದೆ. ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿP ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ತಲಾ ೬೩ ಸೀಟುಗಳಿವೆ ಎಂದರು.
ಕ್ಯಾಂಪಸ್ ಇಂಟರವ್ಯೂ
ಕಾಲೇಜಿನಲ್ಲಿ ಅನುಭವಿ ಉಪನ್ಯಾಸಕ ತಂಡ, ಸುಸಜ್ಜಿತ ಪ್ರಯೋಗಾಲಯ, ವಿಶಾಲವಾಗಿರುವ ಕ್ರೀಡಾಂಗಣ, ಗ್ರಂಥಾಲಯ, ಕ್ಯಾಂಟೀನ್ ವ್ಯವಸ್ಥೆ ಇದೆ. ಪ್ರತಿ ವರ್ಷ ಇನ್ಫೋಸಿಸ್, ಟಿಸಿಎಸ್ ಸೇರಿ ಹಲವು ಐಟಿ ಕಂಪನಿಗಳು ಮತ್ತು ಟೊಯೋಟಾ ಕಿರ್ಲೋಸ್ಕರ್, ಎಲ್ ಆಂಡ್ ಟಿ ರೀತಿಯ ಬೃಹತ್ ಹಾರ್ಡ್ ವೇರ್ ಕಂಪನಿಗಳು ಕ್ಯಾಂಪಸ್ ಸಂದರ್ಶನದ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತವೆ ಎಂದು ಮಾಹಿತಿ ನೀಡಿದರು.
ದ್ವಿಪ್ರತಿಯಲ್ಲಿ ಅರ್ಜಿಸಿ
ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ hಣಣಠಿ://ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ, ನಲ್ಲಿ ಅರ್ಜಿ ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಹಾಗೂ ಆಪ್ಷನ್ ಎಂಟ್ರಿ ಫಾರ್ಮ್‌ಗಳನ್ನು ನಿಗಧಿತ ಸಮಯದಲ್ಲಿ ಸಲ್ಲಿಸಬೇಕು. ಅರ್ಜಿ ಜತೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣಪತ್ರ, ವ್ಯಾಸಂಗ ಪ್ರಮಾಣಪತ್ರ, ಜಾತಿ ಮತ್ತು ಆದಾಯ, ಗ್ರಾಮೀಣ ಮೀಸಲಾತಿ, ಕನ್ನಡ ಮಾಧ್ಯಮ ಸೇರಿ ಇತರೆ ಪ್ರಮಾಣಪತ್ರ, ೪ ಪಾಸ್‌ಪೋರ್ಟ್ ಅಳತೆ ಭಾವಚಿತ್ರ ಸೇರಿ ಎಲ್ಲಾ ದಾಖಲೆಗಳ ಎರಡು ಪ್ರತಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರವೇಶ ಪ್ರಕ್ರಿಯೆ ಕೋಆರ್ಡಿನೇಟರ್ ಡಾ.ಕೆ. ಸುರೇಶ್, ರುದ್ರೇಶ್ ಇದ್ದರು.