ಸುದ್ದಿ 360 ದಾವಣಗೆರೆ, ಜೂ. 27: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಕೇಂದ್ರ ಕಚೇರಿಯ ನೂತನ ಕಟ್ಟಡ ಶುಂಕುಸ್ಥಾಪನೆ ಕಾರ್ಯಕ್ರಮ ಜೂ. 28ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪಿ.ಬಿ. ರಸ್ತೆಯ ತ್ರಿಶೂಲ್ ಕಲಾ ಭವನದಲ್ಲಿ ನೆರವೇರಲಿದೆ. ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅದ್ಯಕ್ಷ ಜೆ.ಎಸ್. ವೇಣುಗೋಪಾಲ ರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಂಸದ ಡಾ.ಜಿ.ಎಂ. ಸಿದ್ದೇಶ್ವರ ಉಪಸ್ಥಿತರಿರುವರು. ಶಾಸಕರಾದ ಎಸ್.ಎ. ರವೀಂದ್ರನಾಥ, ಡಾ. ಶಾಮನೂರು ಶಿವಶಂಕರಪ್ಪ, ಎಂ.ಪಿ. ರೇಣುಕಾಚಾರ್ಯ, ಕೆ. ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಪ್ರೊ. ಎನ್. ಲಿಂಗಣ್ಣ, ಎಸ್. ರಾಮಪ್ಪ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಶಾಸಕ ಬೆಳ್ಳಿ ಪ್ರಕಾಶ್ ಮತ್ತಿತರರು ಭಾಗವಹಿಸಲಿದ್ದಾರೆ.