ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ಸಚಿವರಾದ ಎಸ್ ಟಿ ಸೋಮಶೇಖರ್ ಇಂದು ದಾವಣಗೆರೆಗೆ ಆಗಮಿಸಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಸಂಸದರಾದ ಜಿಎಂ ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ವರಿಷ್ಠಾಧಿಕಾರಿ ರಿಷ್ಯಂತ್ ಕುಮಾರ್, ಮಹಾಪೌರರಾದ ಜಯಮ್ಮ ಆರ್ ಗೋಪಿ ನಾಯ್ಕ್, ನಿಕಟಪೂರ್ವ ಮಹಾಪೌರರಾದ ಎಸ್ ಟಿ ವೀರೇಶ್ ಮಹಾನಗರ ಪಾಲಿಕೆ ಸದಸ್ಯರಾದ ಪ್ರಸನ್ನಕುಮಾರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.