ದಾವಣಗೆರೆ: ನಗರದಲ್ಲಿ ಶ್ರೀ ಎಲ್.ಬಿ.ಕೆ. ಕಲ್ಯಾಣ ಟ್ರಸ್ಟ್ ವತಿಯಿಂದ 7 ನೇ ಬಾರಿಗೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಡಿ.30ರಂದು ಬೆಳಿಗ್ಗೆ11 ಗಂಟೆಗೆ ನಗರದ ಶ್ರೀ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.
ಹರಿಹರ ರಾಜನಹಳ್ಳಿ ವಾಲ್ಮೀಕಿ ಸಂಸ್ಥಾನದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಮಾದರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗುವ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಗಳಾಗಿ ಶಾಸಕ ಕೆ.ಆರ್. ರಮೇಶಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಶಾಸಕ ಎನ್.ಎ. ಹ್ಯಾರೀಸ್, ಮಾಜಿ ಶಾಸಕ ಕೆ.ಎನ್. ರಾಜಣ್ಣ, ಮಾಜಿ ಸಚಿವ ಸಂತೋಷ್ ಲಾಡ್ ಸೇರಿದಂತೆ ಮತ್ತಿತರ ಗಣ್ಯರು ಆಗಮಿಸಲಿದ್ದಾರೆ ಎಂದು ಟ್ರಸ್ಟ್‌ನ ಅಧ್ಯಕ್ಷ ಬಿ. ವೀರಣ್ಣ ತಿಳಿಸಿದ್ದಾರೆ.