ನಿಗಮ ಮಂಡಳಿ: ಹೊಸಬರಿಗೆ ಅವಕಾಶ

ಸುದ್ದಿ360 ಮೈಸೂರು, ಜು.12: ನಿಗಮ ಮಂಡಳಿಗಳಿಗೆ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳ ಕೋರ್ ಕಮಿಟಿಯಲ್ಲಿ  ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನ ಆರು ತಿಂಗಳ ಹಿಂದೆಯೇ ಆಗಿದೆ. ಈ ನಿಟ್ಟಿನಲ್ಲಿ ಬೇರೆಯವರಿಗೂ ಅವಕಾಶ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

Leave a Comment

error: Content is protected !!