ಪಾದಯಾತ್ರೆ ಮೊಟಕುಗೊಳಿಸಿದ ಸಿದ್ಧರಾಮಯ್ಯ

ಹೆಗ್ಗನೂರು: ಕೊರೋನಾ ನಿಯಮ, ನಿರ್ಬಂಧಗಳ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ಜ.09 ರಂದು ರಾಜ್ಯ ಕಾಂಗ್ರೆಸ್ ಚಾಲನೆ ನೀಡಿದೆ. ಪಾದಯಾತ್ರೆ ಕನಕಪುರದ ಹೆಗ್ಗನೂರು ತಲುಪಿದ್ದು, ಇದರಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ, ಸುಸ್ತು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯಗೆ ಆರೋಗ್ಯ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಗೋವಿಂದ ಕಾರಜೋಳ “ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ನನಗೆ ಕಳವಳ ಆಗಿದೆ. ಸಿದ್ಧರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ.ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು” ಎಂದು ಟ್ವೀಟ್ ಮಾಡಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನಡೆಸಲಾಗುತ್ತಿದೆ.

Leave a Comment

error: Content is protected !!