ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ಪಾಲಿಕೆ ಸದಸ್ಯರು ಸಂತಾಪ ಸೂಚಿಸಿದ್ದಾರೆ‌.

ಕುರುಬರ ಸಂಘದ ನಿರ್ದೇಶಕರಾಗಿದ್ದ ಪಿ. ರಾಜಕುಮಾರ್ ಅವರು ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಬೇಸರ ಆಗಿದೆ ಎಂದು ಗಡಿಗುಡಾಳ್ ಮಂಜುನಾಥ್ ಸಂತಾಪ ಸೂಚಕ ಸಂದೇಶದಲ್ಲಿ ಹೇಳಿದ್ದಾರೆ.

ರಾಜ್‌ ಕುಮಾರ್‌ ಅವರು ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಬಲಪಡಿಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದರು. ಕುರುಬ ಸಮಾಜ ಸೇರಿದಂತೆ ಎಲ್ಲರೊಟ್ಟಿಗೆ ಆತ್ಮೀಯರಾಗಿದ್ದ ಅವರ ಅಕಾಲಿಕ ನಿಧನ ದುಃಖ ತಂದಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬದವರಿಗೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!