ಪ್ರಸಕ್ತ ಸಾಲಿನಲ್ಲಿ 507 ಆಫರ್ಸ್ ಸ್ವೀಕರಿಸಿದ ಮದ್ಯ ಕರ್ನಾಟಕದ ಜಿಎಂಐಟಿ ಕಾಲೇಜ್
ಸುದ್ದಿ360 ದಾವಣಗೆರೆ, ಏ.21: ಪೇಸ್ ಡಿಟಿಟೆಕ್ ಇನ್ಫ್ರಾ ಪ್ರೈ ಲಿ ಕಂಪನಿ ಕಳೆದ ಗುರುವಾರ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ನಗರದ ಜಿಎಮ್ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ 48 ವಿದ್ಯಾರ್ಥಿಗಳು ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಗಳಾಗಿ ಆಯ್ಕೆಯಾಗಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮೂಲಕ 2022-23 ರ ಸಾಲಿನಲ್ಲಿ ಇದುವರೆಗೆ 507 ಜಾಬ್ ಆಫರ್ಸ್ ಸ್ವೀಕರಿಸಿದ್ದು, ಇನ್ನೂ 15 ಕಂಪನಿಗಳ ಆಯ್ಕೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದರು.
ಈಗಿನ ಆರ್ಥಿಕ ಹಿಂಜರಿತದ ಸಮಯದಲ್ಲೂ ಜಿಎಂಐಟಿ ಕಾಲೇಜು ವಿದ್ಯಾರ್ಥಿಗಳಿಗೆ ಸಾಕಷ್ಟು ಉದ್ಯೋಗವಕಾಶವನ್ನು ಒದಗಿಸಿದೆ. ಆ ಮೂಲಕ ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಉದ್ಯೋಗವಕಾಶವನ್ನು ನೀಡಿದ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಇದೇ ವೇಳೆ ತಿಳಿಸಿದರು. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ವೈಯು ಸುಭಾಷ್ ಚಂದ್ರ, ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥರಾದ ಡಾ ಪ್ರವೀಣ್ ಜೆ, ಡಾ ಕವಿತಾ ಕೆಜೆ, ಪ್ರೊ ಸಂಪತ್ ಕುಮಾರ್, ಪ್ರೊ ಹನುಮಂತರಾಜು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.