ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ

ಸುದ್ದಿ360 ದಕ್ಷಿಣ ಕನ್ನಡ, ಜು.27: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ ಹಿನ್ನೆಲೆಯಲ್ಲಿ ಸಂಘಪರಿವಾರ ಸಂಘಟನೆಗಳು ಪುತ್ತೂರು, ಸುಳ್ಯ ಕಡಬ, ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಾಹನ ಸಂಚಾರ ನಿಲ್ಲಿಸಿ ಬಂದ್ ಗೆ ಕರೆ ಕೊಡಲಾಗಿತ್ತು.

ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರದೇಶಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ.

ಬಸ್ ಸೌಕರ್ಯವಿಲ್ಲದೆ  ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೌಕರರು ಹಾಗೂ ಜನಜೀವನಕ್ಕೆ ತೊಂದರೆಯಾಗಿದೆ. ಪುತ್ತೂರಿನ ವಿವೇಕಾನಂದ ಕಾಲೇಜು ಸೇರಿದಂತೆ ಕೆಲವು ಖಾಸಗಿ ಶಾಲಾ ಕಾಲೇಜುಗಳು ರಜೆ ಘೋಷಿಸಿವೆ. ಸರ್ಕಾರಿ ಶಾಲಾ ಕಾಲೇಜುಗಳಿಗೆ ಇದುವರೆಗೆ ರಜೆ ಘೋಷಣೆ ಮಾಡಿರುವುದಿಲ್ಲ.

Leave a Comment

error: Content is protected !!