ಸುದ್ದಿ360 ದಾವಣಗೆರೆ ಆ.17: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆ.18ರ ಬೆಳಿಗ್ಗೆ 10.30ಕ್ಕೆ ನಗರದ ಶ್ರೀಡಿ.ದೇವರಾಜ ಅರಸು ಬಡಾವಣೆಯ ಸಿ ಬ್ಲಾಕಿನಲ್ಲಿ ಇರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವಧ್ಯಾನ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಾಕುಮಾರಿ ಲೀಲಾಜಿ ತಿಳಿಸಿದರು.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪಿತ ಬ್ರಹ್ಮಾಕುಮಾರಿ, ಈಶ್ವರೀಯ ವಿಶ್ವವಿದ್ಯಾಲಯದ ಹುಬ್ಬಳ್ಳಿ ವಲಯದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ನಿರ್ಮಲಾಜಿ ಸಾನಿಧ್ಯ ವಹಿಸುವರು. ದಾವಣಗೆರೆಯ ಬ್ರಹ್ಮಾ ಕುಮಾರಿ ಲೀಲಾಜಿ ಅಧ್ಯಕ್ಷತೆ ವಹಿಸುವರು. ದಾವಣಗೆರೆ ಉಪವಿಭಾಗದ ಉಪ ವಿಭಾಗಾಧಿಕಾರಿ ಎನ್.ದುರ್ಗಾಶ್ರೀ ಕಾರ್ಯಕ್ರಮ ಉದ್ಘಾಟನೆ ಮಾಡುವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪತ್ರಕರ್ತರನ್ನು ಸನ್ಮಾನಿಸುವರು ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಣ್ಣ, ದಾವಣಗೆರೆ ಜಿಲ್ಲೆಯ ಅಧ್ಯಕ್ಷ ಮಂಜುನಾಥ್ ಏಕಬೋಟೆ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ.ಸಿ.ವರದರಾಜ, ಮಧು ನಾಗರಾಜ್, ಕೊಟ್ರೇಶ್ ಅಣಬೂರು ಮಠ, ಕಾನಿಪ ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್, ಖಜಾಂಚಿ ಎನ್.ವಿ.ಬದರಿನಾಥ ಇತರರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ
ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಂಜುನಾಥ ಏಕಬೋಟೆ ಮಾತನಾಡಿ, ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘ ದಾವಣಗೆರೆ ಜಿಲ್ಲಾ ಘಟಕದಿಂದ ನೂತನವಾಗಿ ಆಯ್ಕೆಯಾದ ದಾವಣಗೆರೆ ಜಿಲ್ಲೆಯ ಮತ್ತು ಎಲ್ಲಾ ತಾಲ್ಲೂಕು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಆಶಯ ನುಡಿಗಳನ್ನಾಡಿದರೆ, ಸದಾನಂದ ಹೆಗ್ಡೆ ಅಭಿನಂದನಾ ನುಡಿಗಳನ್ನಾಡುವರು. ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಏಕಬೋಟೆ ಅಧ್ಯಕ್ಷತೆ ವಹಿಸುವರು ಎಂದು ಮಾಹಿತಿ ನೀಡಿದರು.
ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಸದಸ್ಯ ಕೆ.ಚಂದ್ರಣ್ಣ ಪತ್ರಕರ್ತರನ್ನು ಸನ್ಮಾನಿಸುವರು. ಮುಖ್ಯತಿಥಿಗಳಾಗಿ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಸುರೇಶ್, ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ್ ಮುದಜ್ಜಿ, ಲಯನ್ಸ್ ಕ್ಲಬ್ನ ಅಧ್ಯಕ್ಷ ಎನ್.ಆರ್.ನಾಗಭೂಷಣ್ ರಾವ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ.ಅಶೋಕ್ ಕುಮಾರ್, ಕೊಟ್ರೇಶ್ ಅಣಬೂರು ಇವರು ಆಗಮಿಸುವರು ಎಂದರು.
ಇದೇ ವೇಳೆ ಜಿಲ್ಲೆಯ ಎಲ್ಲಾತಾಲ್ಲೂಕುಗಳ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಗುತ್ತಿದ್ದು ತಾಲ್ಲೂಕು ಅಧ್ಯಕ್ಷರಾದ ಹರಿಹರದ ಶಾಂಭವಿ ನಾಗರಾಜ್, ಚನ್ನಗಿರಿಯ ಕೆ.ಎಸ್. ವೀರೇಶ್ ಪ್ರಸಾದ್, ಹೊನ್ನಾಳಿಯ ಕೆ.ಎಸ್.ಯೋಗೇಶ್, ಜಗಳೂರಿನ ಜಿ.ಎಸ್.ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಹರಿಹರದ ಎಚ್.ಎಸ್.ಕೀರ್ತಿಕುಮಾರ್, ಚನ್ನಗಿರಿಯ ಎಂ.ಪ್ರಸನ್ನ, ಹೊನ್ನಾಳಿಯ ಚನ್ನೇಶ್ ಬಿ ಇದರಮನಿ, ಜಗಳೂರಿನ ಎಂ.ಲೋಕೇಶ್, ಖಜಾಂಚಿಗಳಾದ ಹರಿಹರದ ಬಿ.ಎಂ.ಚಂದ್ರಶೇಖರಯ್ಯ, ಚನ್ನಗಿರಿಯ ಸಿ.ಎಸ್. ಶಶೀಂದ್ರ, ಹೊನ್ನಾಳಿಯ ಎಲ್.ಸಿ.ರಾಘವೇಂದ್ರ ಹಾಗೂ ಜಗಳೂರಿನ ಜಗದೀಶ್ ಅವರನ್ನು ಸನ್ಮಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಏಕಬೋಟೆ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ, ಕೆ.ಚಂದ್ರಣ್ಣ, ಬಿ.ಕೆ.ವಿಶ್ಚಾಸ್, ಸಿ.ವೇದಮೂರ್ತಿ ಇದ್ದರು.