ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಎಂ ಗೆ ಮಾಹಿತಿ

ಸುದ್ದಿ360 ಬೆಂಗಳೂರು, ಆ.2: ರಾಜ್ಯದ  ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ.  ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಳೆ ಪೀಡಿತ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಸಭೆ ನಡೆಯಿತು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾ ರೆಡ್ಡಿ, ಪ್ರಕೃತಿ ವಿಕೋಪ ನಿರ್ವಹಣಾ ಸೆಲ್ ಮುಖ್ಯಸ್ಥ ಮನೋಜ ಮತ್ತು ಇತರರು ಉಪಸ್ಥಿತರಿದ್ದರು.

Leave a Comment

error: Content is protected !!