ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

ಸುದ್ದಿ360 ಬೆಳಗಾವಿ, ಜೂ.30:  ನಗರದ ಮದ್ಯಭಾಗದಲ್ಲಿ ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ತಾಲ್ಲೂಕಿನ ಮಜಗಾವಿ ಗ್ರಾಮದ ಅಂಬೇಡ್ಕರ್ ಗಲ್ಲಿಯ ನಿವಾಸಿ, 27ರ ವಯೋಮಾನದ ಯಲ್ಲೇಶ ಶಿವಾಜಿ ಕೊಲ್ಕರ್ ಕೊಲ್ಲಲ್ಪಟ್ಟ ವ್ಯಕ್ತಿಯಾಗಿದ್ದು, ಅನೈತಿಕ ಸಂಬಂಧದ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಉದ್ಯಮಭಾಗ ಠಾಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Leave a Comment

error: Content is protected !!