ಮಾಸಾಶನ ಪಡೆಯುತ್ತಿರುವ ಕಲಾವಿದರು  ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ದಾವಣಗೆರೆ; ಏ.13: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಶಾಸನ ಪಡೆಯುತ್ತಿರುವ ಸಾಹಿತಿ ಮತ್ತು ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರವನ್ನು ಏಪ್ರಿಲ್ 25 ರೊಳಗಾಗಿ ಸಲ್ಲಿಸಬೇಕು.

ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ ಮತ್ತು ಬ್ಯಾಂಕ್ ಪಾಸ್ ಬುಕ್‍ನೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ.27 ರಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ದೂ. ಸಂ. 08192-234849 ಗೆ ಸಂಪರ್ಕಿಸಲು ತಿಳಿಸಲಾಗಿದೆ.

Leave a Comment

error: Content is protected !!