ಸುದ್ದಿ360 ದಾವಣಗೆರೆ: ಬಿಸಿಯೂಟ ತಯಾರಕರು ಮಾರ್ಚ್ 16ರ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಸಿಯೂಟ ತಯಾರಕರ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ.

ಮಧ್ಯಾಹ್ನ ಉಪಹಾರ ಯೋಜನೆಯನ್ನು ಶಾಲಾ ಹಂತದಲ್ಲಿ ಅನುಷ್ಠಾನಗೊಳಿಸಲು ಬಿಸಿಊಟ ತಯಾರಕರಾದ ಮುಖ್ಯ ಅಡುಗೆಯವರನ್ನು ಬ್ಯಾಂಕ್ ಜಂಟಿ ಖಾತೆಯಿಂದ ಬದಲಾಯಿಸಿ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕರ ಜಂಟಿ ಬ್ಯಾಂಕ್ ಖಾತೆಯನ್ನು ತೆರೆಯಲು ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿರುವುದನ್ನು ಕೂಡಲೇ ರದ್ದುಗೊಳಿಸುವಂತೆ ಹಾಗೂ ಮೊದಲಿದ್ದಂತೆ ಮುಖ್ಯ ಶಿಕ್ಷಕರ ಮತ್ತು ಮುಖ್ಯ ಅಡುಗೆಯವರ ಬ್ಯಾಂಕ್ ಜಂಟಿ ಖಾತೆಯನ್ನು ಮುಂದುವರೆಸಬೇಕೆಂದು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುವುದು

ದಾವಣಗೆರೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖ್ಯ ಅಡುಗೆಯವರು ಅಂದು ಬೆಳಿಗ್ಗೆ 11- 30 ಕ್ಕೆ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ ಬರಬೇಕೆಂದು ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!